ಪುತ್ತೂರು: ಬೈಕ್ ಅಪಘಾತಕ್ಕೆ ಪಾದಚಾರಿ ಬಲಿ…

178
firstsuddi

ಪುತ್ತೂರು: ರಸ್ತೆ ದಾಟಲು ಯತ್ನಿಸಿದ ವ್ಯಕ್ತಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಮುಕ್ರಂಪಾಡಿ ಕಮ್ಮಾಡಿ ಫ್ಲ್ಯೆವುಡ್ ಫ್ಯಾಕ್ಟರಿ ಬಳಿ ನಡೆದಿದೆ. ಮೃತರನ್ನು ಮಾಯಿದೆ ದೇವುಸ್ ಚರ್ಚ್ ನಲ್ಲಿ ಕಳೆದ ಸುಮಾರು ಹದಿನೈದು ವರ್ಷಗಳಿಂದ ಸೆಕ್ಯೂರಿಟಿ ವೃತ್ತಿ ಮಾಡುತ್ತಿದ್ದ ಲಾರೆನ್ಸ್ ಡಿ’ಸೋಜ (70) ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಾಯಾಳು ಆ ಸಮಯದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಢಿಕ್ಕಿ ಹೊಡೆದ ಬೈಕ್ ಸವಾರ ಮಿಥುನ್ ಎಂಬಾತನಿಗೂ ಗಾಯವಾಗಿದೆ ಎನ್ನಲಾಗಿದ್ದು, ಆತನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.