ಉಪಚುನಾವಣೆ ಫಲಿತಾಂಶ-12 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ…

288
firstsuddi

ಬೆಂಗಳೂರು : ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿದೆ. 15 ವಿಧಾನಸಭಾ ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ತನ್ನ ಆಡಳಿತವನ್ನು ಉಳಿಸಿಕೊಂಡಿದೆ. ಹಿರೇಕೂರಿನಲ್ಲಿ ಬಿಸಿ ಪಾಟೀಲ್, ಯಲ್ಲಾಪುರದಲ್ಲಿ ಶಿವರಾಮ್ ಹೆಬ್ಬಾರ್, ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್, ವಿಜಯನಗರದಲ್ಲಿ ಆನಂದ್ ಸಿಂಗ್, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್, ಕೆ.ಆರ್.ಪುರದಲ್ಲಿ ಬೈರತಿ ಬಸವರಾಜು, ಮಹಾಲಕ್ಷ್ಮೀ ಲೇಔಟ್ ನಲ್ಲಿ ಗೋಪಾಲಯ್ಯ, ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ, ಕಾಗವಾಡ ಕ್ಷೇತ್ರದಲ್ಲಿ ಶ್ರೀಮಂತ ಪಾಟೀಲ, ಕೆ.ಆರ್.ಪೇಟೆಯಲ್ಲಿ ನಾರಾಯಣ ಗೌಡ, ಅಥಣಿ ಕ್ಷೇತ್ರಗಳಲ್ಲಿ ಮಹೇಶ್ ಕುಮಟಳ್ಳಿ, ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್’ಟಿ. ಸೋಮಶೇಖರ್ ಅವರು ಗೆಲುವು ಸಾಧಿಸಿದ್ದಾರೆ.