ಬೆಂಗಳೂರು : ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಮತೆಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ರಿಜ್ವಾನ್ ಅರ್ಷದ್ ಅವರು ಸುಮಾರು 15 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಶಿವಾಜಿನಗರ ಕ್ಷೇತ್ರವನ್ನು ಕಾಂಗ್ರೆಸ್ನ ಭದ್ರಕೋಟೆ ಎಂದು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ.










