ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ…

210
firstsuddi

ನವದೆಹಲಿ : ವಿವಾಧಾತ್ಮಕ ಪೌರತ್ವ ತಿದ್ದುಪಡಿ ಮಸೂದೆ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಲೋಕಸಭೆಯಲ್ಲಿ ನಡೆದ ಪೌರತ್ವ ತಿದ್ದುಪಡಿ ಮಸೂದೆ ಚರ್ಚೆಯು ಸದನದಲ್ಲಿ ಕೋಲಾಹಲ ಉಂಟು ಮಾಡಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಸೂದೆಯನ್ನು ಮಂಡಿಸಿ ಮತಕ್ಕೆ ಹಾಕಿದರು. ಆದರೆ ಇದನ್ನು ವಿಕ್ಷಗಳು ಭಾರಿ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಅಮಿತ್ ಶಾ ಅವರು ಈ ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನದ ಯಾವುದೇ ಕಲಂ ಅನ್ನು ಉಲ್ಲಂಘಿಸಿಲ್ಲ. ಅಲ್ಲದೇ ಪೌರತ್ವ ತಿದ್ದುಪಡಿ ಮಸೂದೆಯು ಶೇ.0.001 ರಷ್ಟು ಕೂಡ ದೇಶದ ಅಲ್ಪಸಂಖ್ಯಾತ ಸಮೂದಾಯದ ವಿರುದ್ಧವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನು ಲೆಕ್ಕಿಸದೆ ವಿಪಕ್ಷಗಳ ಸಂಸದರು ಮಸೂದೆ ಮಂಡಿಸುವುದನ್ನು ವಿರೋಧಿಸುತ್ತಲೆ ಇದ್ದರು. ಹೀಗಾಗಿ ಸುಮಾರು ಒಂದು ಗಂಟೆಗಳ ಕಾಲ ಸುದೀರ್ಘ ಚರ್ಚೆಯಾಯಿತು. ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ಎಐಎಂಐಎಂ ನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ಅನೇಕ ಸಂಸದರು ಸದನದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಈ ಎಲ್ಲಾ ಬೆಳವಣಿಗೆಯಿಂದ ಸ್ಪೀಕರ್ ಓಂ ಬಿರ್ಲಾ ಅವರು ಮಸೂದೆಯನ್ನು ಮಂಡಿಸಿ ಮತಕ್ಕೆ ಹಾಕುವಂತೆ ಸೂಚನೆ ನೀಡಿದರು. ಮಸೂದೆಯನ್ನು ಮತಕ್ಕೆ ಹಾಕಿದಾಗ 293 ಸಂಸದರು ಮಸೂದೆ ಪರವಾಗಿ ಮತ ಹಾಕಿದರೆ, ಪ್ರತಿಪಕ್ಷದ 82 ಸಂಸದರು ವಿರೋಧವಾಗಿ ಮತ ಹಾಕಿದರು. ಪೌರತ್ವ ತಿದ್ದುಪಡಿ ಮಸೂದೆ ಬಹುಮತ ಪಡೆದು ಲೋಕಸಭೆಯಲ್ಲಿ ಪಾಸ್ ಆಗಿದ್ದು, ಧಾರ್ಮಿಕ ಆಧಾರದ ಮೇಲೆ ತಾರತಮ್ಯ ಮಾಡಲಾಗುತ್ತಿದೆ ಎಂದು ಪ್ರತಿಕ್ಷಗಳು ಸದನದಲ್ಲಿ ಗದ್ದಲ ಉಂಟು ಮಾಡಿದವು. ಮಸೂದೆಯನ್ನು ಮಂಡಿಸಿದರೆ ಅಮಿತ್ ಶಾ ಅವರ ಹೆಸರನ್ನು ಹಿಟ್ಲರ್ ಹಾಗೂ ಇಸ್ರೇಲ್ನ ಮೊದಲ ಪ್ರಧಾನಿ ಡೇವಿಡ್ ಬೆನ್ ಗುರಿಯನ್ ಅವರೊಂದಿಗೆ ಸೇರಿಸಲಾಗುವುದು ಎಂದು ಅಸಾದುದ್ದೀನ್ ಓವೈಸಿ ಅವರು ಕಿಡಿಕಾರಿದರು. ಅಲ್ಲದೇ ಅವರ ಈ ಹೇಳಿಕೆಗೆ ಬಿಜೆಪಿ ಸಂಸದರು ಕೂಡಾ ಆಕ್ಷೇಪ ವ್ಯಕ್ತಪಡಿಸಿದ್ದು, ಈ ವೇಲೆ ಮಧ್ಯ ಪ್ರವೇಶಿಸಿದ ಸ್ಪೀಕರ್ ಅವರು ಸದನದಲ್ಲಿ ಅಸಂಸದೀಯ ಪದಗಳನ್ನು ಬಳಸಬೇಡಿ ಎಂದು ಸೂಚಿಸಿದರು.