ಅಯೋಧ್ಯೆ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ 18 ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ…

207
firstsuddi

ನವದೆಹಲಿ : ಅಯೋಧ್ಯೆ ತೀರ್ಪು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದ ಎಲ್ಲಾ 18 ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಹಿಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವದ ಪೀಠ ನ.9ರಂದು ಅಯೋಧ್ಯೆ ವಿವಾಧಿತ ಜಾಗದಲ್ಲಿ ರಾಮಮಂದಿರ ನಿರ್ಮಿಸುವಂತೆ ಆದೇಶ ಹೊರಡಿಸಿತ್ತು. ಅಲ್ಲದೇ ಸುನ್ನಿ ವಕ್ಫ್ ಬೋರ್ಡ್ ಸಂಸ್ಥೆಗೆ ಅಯೋದ್ಯೆಯಲ್ಲೇ ಬೇರೆ ಎಲ್ಲಾದರು 5ಎಕರೆ ಭೂಮಿಯನ್ನು ನೀಡುವಂತೆ ತಿಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ 18ಮರುಪರಿಶೀಲನಾ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಇಂದು ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾ. ಎಸ್.ಎ ಬೊಬ್ಡೆ ಅವರ ನೇತೃತ್ವದ ವಿಭಾಗೀಯ ಪೀಠ 18ಅರ್ಜಿಗಳನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.