ರೇಪ್ ಇನ್ ಇಂಡಿಯಾ ಹೇಳಿಕೆಗೆ ಕ್ಷಮೆಯಾಚುವ ಪ್ರಶ್ನೆಯೇ ಇಲ್ಲ-ರಾಹುಲ್ ಗಾಂಧಿ.

218
firstsuddi

ಜಾರ್ಖಂಡ್ : ರೇಪ್ ಇನ್ ಇಂಡಿಯಾ ಹೇಳಿಕೆಗೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಸಂಸತ್‍ನಲ್ಲಿ ತಮ್ಮ ಹೇಳಿಕೆ ತೀವ್ರ ಟೀಕೆಗೆ ಒಳಗಾಗುತ್ತಿದ್ದಂತೆ ಪ್ರತಿಕ್ರಯಿಸಿದ ಅವರು, ಸದನದಲ್ಲಿ ಈಶಾನ್ಯ ಭಾರತದಲ್ಲಿ ನಡೆಯುತ್ತಿರುವ ಪಛರತ್ವ ತಿದ್ದುಪಡಿ ವಿರುದ್ಧದ ಪ್ರತಿಭಟನೆಯನ್ನು ಮರೆಮಾಚಲು ಬಿಜೆಪಿ ಈ ರೀತಿ ನಡೆದುಕೊಳ್ಳುತ್ತಿದೆ. ಪ್ರತಿದಿನ ಮೋದಿ ಅವರು ಮೇಕ್ ಇನ್ ಇಂಡಿಯಾ ಎಂದು ಹೇಳಿಕೆ ನೀಡುತ್ತಾರೆ. ಆದರೆ ಬಿಜೆಪಿ ಆಡಳಿತ ನಡೆಸುತ್ತಿರುವ ಎಲ್ಲಾ ರಾಜ್ಯಗಳಲ್ಲಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದು, ಪ್ರತಿದಿನ ಮಾಧ್ಯಮಗಳಲ್ಲಿ ಅದೇ ಸುದ್ದಿ ವರದಿಯಾಗುತ್ತಿದೆ. ಈ ಹಿಂದೆ ಪ್ರಧಾನಿ ಮೋದಿ ಅವರು ದೆಹಲಿ ರೇಪ್ ಕ್ಯಾಪಿಟಲ್ ಎಂದು ಹೇಳಿಕೆ ನೀಡಿರುವ ದೃಶ್ಯ ನನ್ನ ಮೊಬೈಲ್‍ನಲ್ಲಿ ಇದೆ ನಾನು ಅದನ್ನು ಟ್ವೀಟ್ ಮಾಡಿದ್ದೇನೆ ಎಲ್ಲರೂ ಅದನ್ನು ನೋಡಲಿ ಎಂದು ಹೇಳಿದರು.