ಚಿಕ್ಕಮಗಳೂರು : ರಾತ್ರೋರಾತ್ರಿ ನಗರದ ಹಲವೆಡೆ ಬೈಕ್ ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು…

323
firstsuddi

ಚಿಕ್ಕಮಗಳೂರು : ರಾತ್ರೋರಾತ್ರಿ ನಗರದ ಹಲವೆಡೆ ಕಿಡಿಗೇಡಿಗಳು ಬೈಕ್‍ಗಳಿಗೆ ಬೆಂಕಿ ಹಚ್ಚಿರುವ ಘಟನೆ ನಗರದ ಮಾರ್ಕೆಟ್ ರಸ್ತೆ, ಪೆನ್ಷನ್ ಮಹಲ್, ಶಾದಿ ಮಹಲ್ ಹಾಗೂ ಗೌರಿ ಕಾಲುವೆ ಬಳಿ ನಡೆದಿದೆ. ನಗರದ ಪ್ರಮುಖ ರಸ್ತೆ ಹಾಗೂ ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಐದು ಬೈಕ್‍ಗಳು ಸುಟ್ಟು ಕರಕಲಾಗಿವೆ. ನಗರದಲ್ಲಿ ಅಶಾಂತಿ ಮೂಡಿಸುವ ಸಲುವಾಗಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಚಿಕ್ಕಮಗಳೂರು ನಗರದೆಲ್ಲೆಡೆ ಆತಂಕ ಸೃಷ್ಟಿಯಾಗಿದೆ. ಇಂದು ಬೆಳ್ಳಂಬೆಳಿಗ್ಗೆ ಪೊಲೀಸ್ ತಂಡಗಳು ನಗರದಲ್ಲಿ ಗಸ್ತು ತಿರುಗುತ್ತಿದ್ದು, ಘಟನಾ ಸ್ಥಳಗಳಿಗೆ ಎಸ್ಪಿ ಹರೀಶ್ ಪಾಂಡೆ, ಎಎಸ್‍ಪಿ ಶೃತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಿಕ್ಕಮಗಳೂರು ನಗರ ಠಾಣೆ ಹಾಗೂ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.