ಬೆಂಗಳೂರು : 10ನೇ ತರಗತಿ ಓದುವ ಮಕ್ಕಳಿಗೆ ಪರೀಕ್ಷೆಯಲ್ಲಿ ಅನುಕೂಲವಾಗುವಂತೆ ಈ ವರ್ಷದಿಂದ ಇಂಗ್ಲೀಷ್ ಪರೀಕ್ಷೆಗೆ ಅರ್ಧಗಂಟೆ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. 2020ರ ಮಾರ್ಚ್-ಏಪ್ರಿಲ್ ನಲ್ಲಿ ನಡೆಯುವ 10ನೇ ತರಗತಿ ಪರೀಕ್ಷೆಯಲ್ಲಿ ಇಂಗ್ಲೀಷ್ ಪರೀಕ್ಷೆ ಬರೆಯಲು ಅರ್ಧಗಂಟೆ ಹೆಚ್ಚಾಗಿ ನೀಡಲು ಎಸ್ಎಸ್ಎಲ್ಸಿ ಬೋರ್ಡ್ ತೀರ್ಮಾನ ಮಾಡಿದೆ ಎನ್ನಲಾಗಿದೆ. ಪ್ರಸ್ತುತ ಪರೀಕ್ಷೆಯಲ್ಲಿ ಮಕ್ಕಳಿಗೆ ಇಂಗ್ಲೀಷ್ ಪರೀಕ್ಷೆ ಬರೆಯಲು ಎರಡೂವರೆ ಗಂಟೆ ಸಮಯ ನೀಡಲಾಗುತ್ತಿದ್ದು, ಆದರೆ ಈ ಸಮಯ ಬರೆಯಲು ಸಾಕಾಗುವುದಿಲ್ಲ ಸಮಯವನ್ನು ವಿಸ್ತರಣೆ ಮಾಡಬೇಕು ಎಂದು ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಮನವಿಯಂತೆ ಎಸ್ಎಸ್ಎಲ್ಸಿ ಬೋರ್ಡ್ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅರ್ಧಗಂಟೆ ಹೆಚ್ಚುವರಿ ಸಮಯವನ್ನು ನೀಡಲು ತೀರ್ಮಾನಿಸಿದ್ದು, ಇದರಿಂದ ಕನ್ನಡ ಮಾಧ್ಯಮದಲ್ಲಿ ಓದುವ ಮಕ್ಕಳಿಗೆ ಪರೀಕ್ಷೆ ವೇಳೆ ಇಂಗ್ಲೀಷ್ ಪ್ರಶ್ನೆ ಪತ್ರಿಕೆಯನ್ನು ಆರಾಮವಾಗಿ ಓದಿ ಅರ್ಥಮಾಡಿಕೊಂಡು ಉತ್ತರ ಬರೆಯಲು ಅನುಕೂಲವಾಗುತ್ತದೆ.










