ಧಾರ್ಮಿಕ ದ್ವೇಷ ಹುಟ್ಟುಹಾಕುವ ಬಿಜೆಪಿ ಸರ್ಕಾರದ ರಹಸ್ಯಕಾರ್ಯಸೂಚಿಗೆ ಮಂಗಳೂರಿನ ಇಬ್ಬರು ಯುವಕರು ಬಲಿಯಾಗಿದ್ದಾರೆ : ಸಿದ್ದರಾಮಯ್ಯ ಆಕ್ರೋಶ…

228
firstsuddi

ಬೆಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಿನ್ನೆ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರ ಗುಂಡೇಟಿಗೆ ಇಬ್ಬರು ನಾಗರೀಕರು ಬಲಿಯಾಗಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ದ್ವೇಷ ಹುಟ್ಟುಹಾಕುವ ಬಿಜೆಪಿ ಸರ್ಕಾರದ ರಹಸ್ಯಕಾರ್ಯಸೂಚಿಗೆ ಮತ್ತು ರಾಜ್ಯ ಸರ್ಕಾರದ ಅಸಾಮರ್ಥ್ಯಕ್ಕೆ ಮಂಗಳೂರಿನ ಇಬ್ಬರು ಯುವಕರು ಬಲಿಯಾಗಿದ್ದಾರೆ. ಮೃತ ಯುವಕರ ದು:ಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು. ಪ್ರತಿಭಟನೆಕಾರರ ಶಾಂತಿ ಕಾಪಾಡಬೇಕೆಂದು ವಿನಂತಿಸುತ್ತಿದ್ದೇನೆ.

ಮೊದಲಬಾರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾದಾಗ ಇಬ್ಬರು ರೈತರು ಗುಂಡಿಗೆ ಆಹುತಿಯಾದರು, ಎರಡನೇ ಬಾರಿ ಮುಖ್ಯಮಂತ್ರಿಯಾದಾಗ ಇಬ್ಬರು ಅಮಾಯಕ ಯುವಕರು ಗುಂಡಿಗೆ ಬಲಿಯಾಗಿದ್ದಾರೆ. ಬಿಜೆಪಿ ಮೂಲತ: ರೈತ ಮತ್ತು ಯುವಜನ ವಿರೋಧಿ ಎನ್ನುವುದು ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.