ಶ್ರೀಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ-ನಾಳೆ ಅಮಿತ್ ಶಾ, ಬಿಎಸ್‍ವೈ ಭೇಟಿ ಸಾಧ್ಯತೆ…

268
firstsuddi

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ಸ್ವಾಮೀಜಿಯನ್ನು ಇಂದು ಮುಂಜಾನೆ 3ಗಂಟೆ ಸುಮಾರಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶ್ರೀಗಳಿಗೆ ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪೇಜಾವರ ಶ್ರೀಗಳ ಆಪ್ತ ಕಾರ್ಯದರ್ಶಿ ಟಿ.ಪಿ. ಅನಂತ್ ಅವರಿಗೆ ಕರೆ ಮಾಡಿ ಶ್ರೀಗಳ ಆರೋಗ್ಯವನ್ನು ವಿಚಾರಿಸಿ ಶೀಘ್ರವಾಗಿ ಗುಣಮುಖರಾಗುವಂತೆ ಹಾರೈಸಿದ್ದು, ನಾಳೆ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಉಡುಪಿಗೆ ಭೇಟಿ ನೀಡುವ ಸಾಧ್ಯತೆ ಎಂದು ಮೂಲಗಳಿಂದ ತಿಳಿದುಬಂದಿದೆ.