ಹಿಂಸಾಚಾರಕ್ಕೆ ಪ್ರಚೋದನೆ ವಿರೋಧ ಪಕ್ಷದವರಿಂದ ಅಲ್ಲ, ಅದನ್ನು ನಿರಂತರವಾಗಿ ಮಾಡ್ತಾ ಇರುವವರು ಸಿ.ಟಿ. ರವಿ : ಸಿದ್ದರಾಮಯ್ಯ.

264
firstsuddi

ಬೆಂಗಳೂರು : ಪೌರತ್ವ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದರಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಗಳೂರು ಭೇಟಿಗೆ ಪೊಲೀಸ್ ಆಯುಕ್ತರು ನಿರ್ಬಂಧ ಹೇರಿದ್ದು, ಈ ಕುರಿತು ಟ್ವಿಟರ್ ಮೂಲಕ ಪ್ರತಿಕ್ರಯಿಸಿದ ಸಿದ್ದರಾಮಯ್ಯ ಅವರು, “ ವಾಹನ, ರೈಲು, ವಿಮಾನ ಯಾವುದರ ಮೂಲಕವೂ ನಾನು ಮಂಗಳೂರು ಪ್ರವೇಶ ಮಾಡಬಾರದೆಂದು ಪೊಲೀಸರು ಆದೇಶ ಹೊರಡಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರೇ ಪ್ರಧಾನಿ ಮೋದಿ ಅವರಿಗೆ ಹೇಳಿ ತುರ್ತುಪರಿಸ್ಥಿತಿ ಹೇರಿ ನಮ್ಮನ್ನಲ್ಲ ಜೈಲಿಗೆ ಹಾಕಿ ನಿಮ್ಮ ಮನಸೋಇಚ್ಛೆ ರಾಜ್ಯಭಾರ ಮಾಡಿ. ನಮ್ಮ ಜನರನ್ನು ನಾವು ಭೇಟಿಯಾಗದಂತೆ ನಿಷೇಧಿಸಿ ಹಿಂಸಿಸಬೇಡಿ. ಹಿಂಸಾಚಾರಕ್ಕೆ ಪ್ರಚೋದನೆ ವಿರೋಧ ಪಕ್ಷದವರಿಂದ ಅಲ್ಲ, ಅದನ್ನು ನಿರಂತರವಾಗಿ ಮಾಡ್ತಾ ಇರುವವರು ನಿಮ್ಮದೇ ಸಹೋದ್ಯೋಗಿ ಸಿ.ಟಿ. ರವಿ. ಬಿ.ಎಸ್. ಯಡಿಯೂರಪ್ಪ ಅವರೇ, ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಒಬ್ಬ ವ್ಯಕ್ತಿ ಹೇಳಿಕೆ ನೀಡಿದ ನಂತರವೂ ಪೊಲೀಸರು ಕಣ್ಣು ಮುಚ್ಚಿಕೊಂಡಿದ್ದಾರೆಂದರೆ ರಾಜ್ಯದಲ್ಲಿ ಸರ್ಕಾರ ಸತ್ತಿದೆ ಎಂದರ್ಥ ಎಂದು ಟ್ವೀಟ್ ಮಾಡಿದ್ದಾರೆ.