ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿರುವುದು ಸರಿಯಲ್ಲ : ಸಿದ್ದರಾಮಯ್ಯ.

183
firstsuddi

ಮಂಗಳೂರು : ಪೌರತ್ವ ತಿದ್ದುಪಡಿ ವಿರೋಧಿಸಿ ನಗರದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ನಡೆದ ಗೋಲಿಬಾರ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೋಲಿಬಾರ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದನ್ನು ಖಂಡಿಸುತ್ತೇನೆ. ಸಿಐಡಿ ಇಲಾಖೆಯಲ್ಲಿ ಕೆಲಸ ಮಾಡುವವರು ಪೊಲೀಸರೇ. ಫೈರಿಂಗ್ ಮಾಡಿದ್ದು ಕೂಡಾ ಪೊಲೀಸರೇ. ಆದರೆ ಈಗಾ ಈ ಪ್ರಕರಣವನ್ನು ಪೊಲೀಸರಿಂದಲೇ ತನಿಖೆ ಮಾಡಿಸುವುದು ಎಷ್ಟರ ಮಟ್ಟಿಗೆ ಸರಿ. ಅಲ್ಲದೇ ಇದು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಈ ಬಗ್ಗೆ ನಾನು ಹಿಂದೆಯೂ ಒತ್ತಾಯಿಸಿದ್ದೇನೆ. ಮುಂದೆಯೂ ಒತ್ತಾಯಿಸುತ್ತೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸುಳ್ಳು ಹೇಳುತ್ತಾರೆ. ಅವರಿಗೆ ಸತ್ಯ ಹೇಳಲು ಗೊತ್ತಿಲ್ಲ. ಅವರು ಪೊಲೀಸರಿಗೆ ಸರ್ಟಿಫಿಕೇಟ್ ನೀಡುತ್ತಾರೆ. ಅವರು ಮುಖ್ಯ ಸಾಕ್ಷಿನಾ? ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾದ ತೇಜಸ್ವಿ ಸೂರ್ಯರವರು ಮುಸಲ್ಮಾನರನ್ನು ಉದ್ದೇಶಿಸಿ ಎದೆ ಸೀಳಿದರೆ ನಾಲ್ಕಕ್ಷರ ಗೊತ್ತಿಲ್ಲದವರು ಪ್ರತಿಭಟನೆ ಮಾಡುತ್ತಾರೆಂದು ನೀಡಿದ್ದ ಹೇಳಿಕೆ ವಿಷಯಕ್ಕೆ ಸಂಬಂದಿಸಿದಂತೆ ಪ್ರತಿಕ್ರಯಿಸಿದ ಅವರು, ತೇಜಸ್ವಿ ಸೂರ್ಯ ಒಬ್ಬ ಆರ್‍ಎಸ್‍ಎಸ್ ವ್ಯಕ್ತಿಯಾಗಿದ್ದು, ಬಡವರು, ಕೂಲಿ ಕಾರ್ಮಿಕರು ಹಾಗೂ ದಲಿತರನ್ನು ಅವರು ಪ್ರತಿನಿಧಿಸುತ್ತಿಲ್ಲ. ದಲಿತರು ಹಾಗೂ ಶೂದ್ರರನ್ನು ಅವಕಾಶವಂಚಿತರನ್ನಾಗಿ ಮಾಡಿದವರನ್ನು ಪ್ರತಿನಿಧಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.