ಭಾರತೀಯ ಕಮ್ಯುನಿಸ್ಟ್ ಪಕ್ಷದ ಕಚೇರಿಗೆ ದುಷ್ಕರ್ಮಿಗಳಿಂದ ಬೆಂಕಿ ಹಚ್ಚಲು ಯತ್ನ…!

162
firstsuddi

ಬೆಂಗಳೂರು : ಮಲ್ಲೇಶ್ವರಂ ನಲ್ಲಿರುವ ಭಾರತ ಕಮ್ಯುನಿಸ್ಟ್ ಪಕ್ಷದ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಲು ಯತ್ನಿಸಿರುವ ಘಟನೆ ನಡೆದಿದ್ದು, ದುಷ್ಕರ್ಮಿಗಳು ಕಳೆದ ರಾತ್ರಿ ಸಿಪಿಐ ಕಚೇರಿ ಮುಂದೆ ನಿಲ್ಲಿಸಿದ್ದ ಬೈಕ್‍ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ 6 ಬೈಕ್‍ಗಳು, ಕಚೇರಿಯ ಬಾಗಿಲು ಸುಟ್ಟಿದ್ದು, ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.