ಸಿಪಿಐ ಕಚೇರಿಗೆ ಬೆಂಕಿ ಹಚ್ಚಿರುವುದು ಸೈದ್ಧಾಂತಿಕ ವಿರೋಧಿಗಳನ್ನು ರಾಜಕೀಯವಾಗಿ ಎದುರಿಸಲಾಗದವರ ಹತಾಶ ಪ್ರಯತ್ನ : ಸಿದ್ದರಾಮಯ್ಯ

184
firstsuddi

ಬೆಂಗಳೂರು : ಕಳೆದ ರಾತ್ರಿ ದುಷ್ಕರ್ಮಿಗಳು ಬೆಂಗಳೂರಿನ ಕಮ್ಯೂನಿಸ್ಟ್ ಪಕ್ಷದ ಕಚೇರಿ ಎದುರು ನಿಲ್ಲಿಸಿದ್ದ ಬೈಕ್‍ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ದುಷ್ಠರನ್ನು ಶೀಘ್ರವಾಗಿ ಬಂಧಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. “ಬೆಂಗಳೂರಿನ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿರುವುದು ಸೈದ್ಧಾಂತಿಕ ವಿರೋಧಿಗಳನ್ನು ರಾಜಕೀಯವಾಗಿ ಎದುರಿಸಲಾಗದವರ ಹತಾಶ ಪ್ರಯತ್ನ. ಈ ಕೃತ್ಯ ಎಸಗಿದ ದುಷ್ಕರ್ಮಿಗಳು ಮತ್ತು ಅವರಿಗೆ ಪ್ರಚೋದನೆ ನೀಡಿರುವ ದುಷ್ಟರನ್ನು ಪತ್ತೆ ಹಚ್ಚಿ ತಕ್ಷಣ ಬಂಧಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.