ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿ ಈಗ ಇಲ್ಲ ಎನ್ನುತ್ತಿರುವ ಬಿಎಸ್ವೈ ವಚನ ಭ್ರಷ್ಟ, ಸುಳ್ಳುಗಾರ : ಹೆಚ್.ಡಿ. ಕುಮಾರಸ್ವಾಮಿ

164
firstsuddi

ಬೆಂಗಳೂರು : ಮಂಗಳೂರು ಗೋಲಿಬಾರ್‍ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಘೋಷಿಸಿದ್ದ ಪರಿಹಾರ ಹಣವನ್ನು ಮುಖ್ಯಮಮತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಾಪಾಸ್ ಪಡೆದಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ರಾಜ್ಯ ಸರ್ಕಾರ ಹಾಗೂ ಮಂಗಳುರು ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಮಂಗಳೂರಿನಲ್ಲಿ ಆ’ರಕ್ಷಕ’ರಿಂದಲೇ ಪರಿಸ್ಥಿತಿಯನ್ನು ಪ್ರಕ್ಷುಬ್ಧಗೊಳಿಸಿದ ಸರ್ಕಾರ ಇಬ್ಬರು ಅಮಾಯಕರನ್ನು ಕೊಂದಿದ್ದೂ ಅಲ್ಲದೇ ಪರಿಹಾರವನ್ನೂ ವಂಚಿಸಿದೆ. ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿ ಈಗ ಇಲ್ಲ ಎನ್ನುತ್ತಿರುವ ಬಿಎಸ್ವೈ ವಚನ ಭ್ರಷ್ಟ, ಸುಳ್ಳುಗಾರ. ಸತ್ತವರ ಹೆಸರು ಆರೋಪಿಗಳ ಪಟ್ಟಿಯಲ್ಲಿದೆ ಎಂದು ಪರಿಹಾರ ವಂಚನೆಗೆ ಬಿಎಸ್ವೈ ನೀಡಿರುವ ಸಬೂಬು ಎಂಥ ಕ್ಷುಲ್ಲಕ? ಹೋರಾಟ ಅಪರಾಧವೇ? ಹೋರಾಟ ಸಂವಿಧಾನ ಬದ್ಧ ಹಕ್ಕು. ಹೋರಾಟಗಳನ್ನು ಹತ್ತಿಕ್ಕುವವರು ಸಂವಿಧಾನ ವಿರೋಧಿಗಳು. ದೇಶಭ್ರಷ್ಟರು. ಅಭಿಪ್ರಾಯ ಬೇಧವನ್ನು ಬಿಜೆಪಿ ಸಹಿಸುವುದಿಲ್ಲ. ಹೋರಾಟಗಳನ್ನು, ಹೋರಾಟಗಾರರನ್ನು ‘so ಛಿಚಿಟಟeಜ ಹೋರಾಟಗಾರ’ ಯಡಿಯೂರಪ್ಪ ಸಹಿಸುವುದಿಲ್ಲ. ಬಿಎಸ್ವೈ ನಿಜವಾಗಿಯೂ ಹೋರಾಟಗಾರರಾಗಿದ್ದರೆ ಪರಿಹಾರ ಮಂಜೂರು ಮಾಡಲಿ. ಇಲ್ಲವೇ ತಮ್ಮದು ಕೊಲೆಗಡುಕ ಸರ್ಕಾರ ಎಂದು ಒಪ್ಪಲಿ. ಯಡಿಯೂರಪ್ಪನವರು ಮಂಗಳೂರಿಗೆ ಭೇಟಿ ನೀಡಿದಂದೇ ಗೋಲಿಬಾರಿಗೆ ಬಲಿಯಾದವರು ಗಲಭೆಯಲ್ಲಿ ಭಾಗಿಯಾದವರು ಎಂದು ಪೊಲೀಸರು ಯಡಿಯೂರಪ್ಪನವರಿಗೆ ಮಾಹಿತಿ ನೀಡಿರಲಿಲ್ಲವೇ? ಅಂದು ಯಡಿಯೂರಪ್ಪನವರಿಗೆ ಆ ಎಡಿಟೆಡ್ ವೀಡಿಯೋ ತೋರಿಸಿರಲಿಲ್ಲವೇ? ನಾಲ್ಕು ದಿನ ಕಳೆದ ನಂತರ ಗೋಲಿಬಾರಿಗೆ ಬಲಿಯಾದವರಿಬ್ಬರೂ ಗಲಭೆಕೋರರು ಎಂದು ಬಿಂಬಿಸಿರುವ ಉದ್ದೇಶವಾದರೂ ಏನು? ಇದನ್ನು ನೀವು ಸುಲಭವಾಗಿ ಅರಗಿಸಿಕೊಳ್ಳಲು ಸಾಧ್ಯವಿಲ್ಲ, ಜನತೆಗೆ ಉತ್ತರ ನೀಡಬೇಕಾಗುತ್ತದೆ. ಅಮಾಯಕರ ಮೇಲೆ ನಿಮ್ಮ ನೀಚ ಕೆಲಸದ ತಪ್ಪನ್ನು ಹೊರಿಸಿದರೆ ಮುಂದಿನ ದಿನಗಳಲ್ಲಿ ಪ್ರಾಯಶ್ಚಿತಕ್ಕೆ ತಯಾರಾಗಬೇಕಾಗುತ್ತದೆ. ಬಿಎಸ್ವೈ ಆಡಳಿತದಲ್ಲಿ ಜನರಿಗೆ, ಹೋರಾಟಗಾರರಿಗೆ ರಕ್ಷಣೆ ಇಲ್ಲ. ಎಷ್ಟೇ ಆದರೂ ಇದು ಅನರ್ಹ ಸರ್ಕಾರವಲ್ಲವೇ? ಎಂದು ಟ್ವೀಟ್ ಮಾಡಿದ್ದಾರೆ.