100ಮಂದಿ ಪ್ರಯಾಣಿಕರಿದ್ದ ವಿಮಾನ ಪತನ-14ಮಂದಿ ಸಾವು…

256
firstsuddi

ಅಲ್ಮಾಟಿ : ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ವಿಮಾನವೊಂದು ಪತನವಾಗಿ 14ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಕಝಾಕಿಸ್ತಾನದ ಅಲ್ಮಾಟಿ ಪ್ರದೇಶದಲ್ಲಿ ನಡೆದಿದೆ. ಸುಮಾರು 100 ಮಂದಿ ಪ್ರಯಾಣಿಕರಿದ್ದ ವಿಮಾನ ಅಲ್ಮಾಟಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೂರ್ ಸುಲ್ತಾನ್ ಕಡೆಗೆ ಹೊರಟಿತ್ತು. ಆದರೆ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ಏರ್‍ಪೋರ್ಟ್ ಸಮೀಪದಲ್ಲಿದ್ದ ಎರಡು ಅಂತಸ್ಥಿನ ಕಟ್ಟಡವೊಂದಕ್ಕೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, 14 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಅಲ್ಲದೇ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಅವರನ್ನು ವಿಮಾನ ನಿಲ್ದಾಣದ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೈಲಟ್‍ನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಸದ್ಯ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.