ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಕಾರು, 6ಮಂದಿ ಸಾವು…

272
firstsuddi

ಉತ್ತರ ಪ್ರದೇಶ : ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಉರುಳಿ ಬಿದ್ದು 6ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾ ಬಳಿ ನಡೆದಿದೆ. ಕಾರಿನಲ್ಲಿ 11ಮಂದಿ ತಡರಾತ್ರಿ ಸಂಬಾಲದಿಂದ ನವದೆಹಲಿಗೆ ಮಾಡುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಉತ್ತರ ಭಾರತದಲ್ಲಿ ತಾಪಮಾನ ಕಡಿಮೆಯಾಗಿದ್ದರಿಂದ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿತ್ತು. ಹೀಗಾಗಿ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಉರುಳಿದ್ದು, ಪರಿಣಾಮ 6ಮಂದಿ ಮೃತಪಟ್ಟಿದ್ದಾರೆ. ಇನ್ನುಳಿದ 5ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.