ಮಂಗಳೂರು ಗೋಲಿಬಾರ್; ಉಡುಪಿ ಜಿಲ್ಲಾಧಿಕಾರಿಯಿಂದ ನ್ಯಾಯಾಂಗ ತನಿಖೆ ಆರಂಭ…

169
firstsuddi

ಮಂಗಳೂರು: ಮಂಗಳೂರು ಗೋಲೀಬಾರ್ ಸಂಬಂಧ ನ್ಯಾಯಾಂಗ ತನಿಖೆಯನ್ನು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಸೋಮವಾರ ಆರಂಭಿಸಿದರು.ಅವರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರೊಂದಿಗೆ ಸಮಾಲೋಚಿಸಿದರು. ಬಳಿಕ ಸ್ಟೇಟ್ ಬ್ಯಾಂಕ್ ಪರಿಸರ, ಸಿಟಿ ಬಸ್ ನಿಲ್ದಾಣ, ನೆಲ್ಲಿಕಾಯಿ ರಸ್ತೆ ಗೆ ಭೇಟಿ ನೀಡಿ ಪರಿಶೀಲಿಸಿದರು.ಮಂಗಳೂರಿನಲ್ಲಿ ಡಿಸೆಂಬರ್ 19ರಂದು ಪೊಲೀಸರು ನಡೆಸಿದ ಗೋಲಿಬಾರ್ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ ನೀಡಿದ್ದು, ಗೋಲಿಬಾರ್ನಲ್ಲಿ ಇಬ್ಬರು ಮೃತಪಟ್ಟಿದ್ದರು. ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರನ್ನು ಕಾರ್ಯನಿರ್ವಾಹಕ ದಂಡಾಧಿಕಾರಿಯನ್ನಾಗಿ ನೇಮಿಸಿ, ವಿಚಾರಣೆ ನಡೆಸಲು ಆದೇಶ ನೀಡಿತ್ತು. ವಿಚಾರಣಾಧಿಕಾರಿಯು ಈ ಆದೇಶ ಹೊರಡಿಸಿದ ದಿನಾಂಕದಿಂದ 3 ತಿಂಗಳೊಳಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ಪೂರ್ಣಗೊಳಿಸಿ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.