ಸಂಕ್ರಾಂತಿ ಹಬ್ಬದ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಸೂಚನೆ ನೀಡಿದೆ : ಶ್ರೀರಾಮುಲು.

187
firstsuddi

ಬೆಂಗಳೂರು : ಸಂಕ್ರಾಂತಿ ಹಬ್ಬದ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ಭೇಟಿ ನೀಡಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು. ಇದೇ ವೇಳೆ ಮಹಾರಾಷ್ಟ್ರ ನಾಯಕರು ಗಡಿ ವಿಚಾರವಾಗಿ ಗೊಂದಲ ಸೃಷ್ಠಿಸುತ್ತಿರುವ ಬಗ್ಗೆ ಪ್ರತಿಕ್ರಯಿಸಿದ ಅವರು, ಉದ್ಧವ್ ಠಾಕ್ರೆ ಅವರು ಮುಖ್ಯಮಮತ್ರಿ ಆದ ಬಳಿಕ ಶಿವಸೇನೆ ಕಾರ್ಯಕರ್ತರ ಪುಂಡಾಟ ಹೆಚ್ಚಾಗಿದೆ. ಆದರೆ ನೆಲ, ಜಲ, ಭಾಷೆ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗಿಯೇ ಇರುತ್ತೇವೆ. ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು, ಆದರೆ ಮಹಾರಾಷ್ಟ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಕ್ಯಾತೆ ತೆಗೆಯುತ್ತಿವೆ. ಶಿವಸೇನೆಯ ಪುಂಡಾಟಿಕೆಗೆ ತಕ್ಕ ಉತ್ತರ ನೀಡುತ್ತೇವೆ ಎಂದರು.