ಮಂಗಳೂರು ಹಿಂಸಾಚಾರ: ನ್ಯಾಯಾಂಗ ಬಂಧನದಲ್ಲಿರುವವರು ಅಮಾಯಕರಾಗಿದ್ದರೆ ಕಾನೂನು ರೀತಿಯಲ್ಲಿ ನ್ಯಾಯ ಒದಗಿಸಲಾಗುವುದು : ಬಸವರಾಜ ಬೊಮ್ಮಾಯಿ.

317
firstsuddi

ಮಂಗಳೂರು : ಪೌರತ್ವ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಅಹಿತಕರ ಘಟನೆ ಪ್ರಕೃಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವವರು ಅಮಾಯಕರಾಗಿದ್ದರೆ ಕಾನೂನು ರೀತಿಯಲ್ಲಿ ನ್ಯಾಯ ಒದಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮಾಲೋಚನಾ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಡಿ.19ರ ಬಳಿಕ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಎಲ್ಲಾ ನಾಗರೀಕರು ಶಾಂತಿಗೆ ಒತ್ತು ನೀಡಿದ್ದಾರೆ ಎಂದರು. ಇದೇ ವೇಳೆ ಗೋಲಿಬಾರ್ ಸಂತ್ರಸ್ಥರಿಗೆ ಘೋಷಣೆ ಮಾಡಿದ್ದ ಪರಿಹಾರವನ್ನು ವಾಪಾಸ್ ಪಡೆದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ತನಿಖಾ ವರದಿಯ ಆಧಾರದ ಮೇಲೆ ಸೂಕ್ತ ಕ್ರಮಕೈಗಳ್ಳಲಾಗುವುದು. ಪೊಲೀಸ್ ಇಲಾಖೆ ಹಾಗೂ ಸಮುದಾಯಗಳ ಬಗ್ಗೆ ಸೌಹಾರ್ಧ ವಾತಾವರಣ ಕಲ್ಪಿಸಲು ಸೂಚಿಸಿದ್ದೇನೆ ಎಂದರು.