ಭಾರತವನ್ನು ಸಮಾಜದೊಂದಿಗೆ ಜೋಡಿಸುವ ಕೆಲಸವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಮಾಡುವಲ್ಲಿ ಮೊದಲ ಸ್ಥಾನದಲ್ಲಿದೆ : ನರೇಂದ್ರ ಮೋದಿ

174
firstsuddi

ಬೆಂಗಳೂರು : ಭಾರತವನ್ನು ಸಮಾಜದೊಂದಿಗೆ ಜೋಡಿಸುವ ಕೆಲಸವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಮಾಡುವಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಂಗಳೂರು ಮೊದಲು ಗಾರ್ಡನ್ ಸಿಟಿಯಾಗಿತ್ತು, ಇಂದು ಸ್ಟಾರ್ಟ್ ಅಪ್ ಕೇಂದ್ರವಾಗಿದ್ದು, ಜಗತ್ತು ಬೆಂಗಳುರಿನತ್ತ ಮುಖ ಮಾಡುತ್ತಿದೆ. ದೇಶದಲ್ಲಿ ಉತ್ಪಾದನೆಯಾಗುವ ಸ್ಮಾರ್ಟ್ ಫೋನ್‍ಗಳು ಜನರನ್ನು ತಂತ್ರಜ್ಞಾನದೊಂದಿಗೆ ಸಂಪರ್ಕಿಸುತ್ತಿವೆ. ಕಳೆದ ಐದು ವರ್ಷಗಳಲ್ಲಿ ಗ್ರಾಮೀಣ ಭಾಗಗಳು ಅಭಿವೃದ್ದಿ ಹೊಂದುತ್ತಿವೆ. ಸ್ವಚ್ಛ ಭಾರತ್ ದಿಂದ ಈಗಿನ ಆಯುಷ್ಮಾನ್ ಭಾರತ್ ಯೋಜನೆಗಳು ಜನರಿಗೆ ತಲುಪುವಲ್ಲಿ ತಂತ್ರಜ್ಞಾನದ ಪಾತ್ರವಿದೆ. ಅಭಿವೃದ್ದಿ ವಿಜ್ಞಾನ ಮತ್ತು ತಂತ್ರಜ್ಞಾನದಿಂದ ಆಗಿದೆ ಎಂದರು.

ಇಂದು ಇ-ಕಾಮರ್ಸ್‍ನಿಂದಾಗಿ ವ್ಯವಹಾರಗಳು ಕ್ಷಣಾರ್ಧದಲ್ಲಿ ಬೆರಳ ತುದಿಯಲ್ಲಿ ನಿಂತಿದೆ. ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗದ ಜನರಿಗೂ ತಂತ್ರಜ್ಞಾನ ಸೌಲಭ್ಯ ಸಿಗುವಂತಾಗಬೇಕಿದೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು, ಪ್ಲಾಸ್ಟಿಕ್ ಪರ್ಯಾಯ ವಸ್ತುಗಳ ಸಂಶೋಧನೆ ಸೇರಿದಂತೆ ಇನ್ನಿತರ ಅನ್ವೇಷನೆಗಳು ಇಂದು ನಡೆಯಬೇಕಿದೆ. ಪ್ಲಾಸ್ಟಿಕ್ ತಾಜ್ಯದ ಪುನರ್ ಬಳಕೆಯ ಬಗ್ಗೆ ಚಿಂತಿಸಬೇಕಿದೆ. ಒಂದೆ ಬಾರಿ ಬಳಕೆಯಾಗುವ ಪ್ಲಾಸ್ಟಿಕ್ ನಿಂದ ಭಾರತ ಮುಕ್ತವಾಗಬೇಕಿದೆ. 2022ರ ವೇಳೆಗೆ ಕಚ್ಚಾತೈಲದ ಬಳಕೆ ಶೇ.10ರಷ್ಟು ಕಡಿಮೆಗೊಳಿಸುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಸ್ಟಾರ್ಟ್ ಅಪ್ ಆರಂಭವಾಗಬೇಕಿದೆ ಎಂದರು.