ಗುಜರಾತ್ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇನ್ನೂ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಆದರೆ ಯಾವುದೇ ಕಾರಣಕ್ಕೂ ಈ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಗುಜರಾತ್‍ನ ಜೋಧ್‍ಪುರದಲ್ಲಿ ನಡೆದ ಪೌರತ್ವ ತಿದ್ದುಪಡಿ ಕುರಿತು ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಕಾಂಗ್ರೆಸ್ ಹಾಗೂ ಇತರ ಪಕ್ಷಗಳು ಪೌರತ್ವ ತಿದ್ದುಪಡಿ ಕುರಿತು ಜನರಲ್ಲಿ ಅಪಪ್ರಚಾರ ಮೂಡಿಸುವ ಪ್ರಯತ್ನ ಮಾಡುತ್ತಿದೆ. ಈ ಕಾಯ್ದೆಯಿಂದ ದೇಶದ ಯಾವುದೇ ನಾಗರೀಕನಿಗೂ ತೊಂದರೆಯಾಗುವುದಿಲ್ಲ. ಕಾಂಗ್ರೆಸ್ ಪಕ್ಷ ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಜನರಲ್ಲಿ ತಪ್ಪು ಮಾಹಿತಿಯನ್ನು ನೀಡುತ್ತಿದೆ. ಅಲ್ಲದೆ ನಾವು ಈಗಾಗಲೇ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ತೆಗೆದುಕೊಂಡಿರುವ ನಿರ್ಧಾರದಿಂದ ಒಂದಿಂಚೂ ಕೂಡಾ ಹಿಂದೆ ಸರಿಯುವುದಿಲ್ಲ ಎಂದರು.










