ಖಾಸಗಿ ಬಸ್ ಹಾಗೂ ಓಮ್ನಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ-ಮೂವರು ಸಜೀವ ದಹನ…

239
firstsuddi

ತುಮಕೂರು : ಖಾಸಗಿ ಬಸ್ ಹಾಗೂ ಓಮ್ನಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ರಾಷ್ಟ್ರೀ ಹೆದ್ದಾರಿ 206ರ ದೊಡ್ಡಗುಣಿ ಗ್ರಾಮದ ಬಳಿ ನಡೆದಿದೆ. ವಸಂತಕುಮಾರ್(55) ರಾಮಯ್ಯ(55) ಹಾಗೂ ನರಸಮ್ಮ(65) ಮೃತ ದುರ್ಧೈವಿಗಳು ಎಂದು ಗುರುತಿಸಲಾಗಿದ್ದು, ಬೆಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಶ್ರೀಶ ಟ್ರಾವೆಲ್ಸ್ ಹಾಗೂ ಎನ್ ಹೊಸಹಳ್ಳಿ ಗ್ರಾಮದಿಂದ ನಿಟ್ಟೂರು ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಒಟ್ಟು 6ಮಂದಿ ಅನಾರೋಗ್ಯದಿಂದ ಬಳಲುತ್ತಿದ್ದ ನರಸಮ್ಮ ಎಂಬುವವರನ್ನು ನಿಟ್ಟೂರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದ್ದು, ಬಸ್ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಹೊರಗೆ ಬಿದ್ದರೆ, ಇನ್ನುಳಿದ ಮೂವರು ಸಜೀವದಹನವಾಗಿದ್ದಾರೆ. ಅಪಘಾತದ ತೀವ್ರತೆಗೆ ಖಾಸಗಿ ಬಸ್ ಹಾಗೂ ಓಮ್ನಿ ವ್ಯಾನ್ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಗಾಯಗೊಂಡ ನರಸಿಂಹಮೂರ್ತಿ, ರಾಧಾಮಣಿ, ಹಾಗೂ ರವಿ ಎಂಬುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತ ಸಂಭವಿಸುತ್ತಿದ್ದಂತೆ ಬಸ್‍ನಲ್ಲಿದ್ದ ಪ್ರಯಾಣಿಕರು ಕೂಡಲೆ ಕೆಳಗೆ ಇಳಿದ ಕಾರಣ ಬಸ್‍ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.