ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ವಿಷ್ಣುವರ್ಧನ್ ಅಧಿಕಾರ ಸ್ವೀಕಾರ…

174
firstsuddi

ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎನ್ ವಿಷ್ಣುವರ್ಧನ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. 2015ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ವಿಷ್ಣುವರ್ಧನ್, ಮೂರು ವರ್ಷಗಳ ಹಿಂದೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಒಂದೂವರೆ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಮೈಸೂರು ಎಸ್ಪಿಯಾಗಿ ವರ್ಗಾವಣೆಗೊಂಡಿದ್ದರು. ನಿರ್ಗಮನ ಎಸ್ಪಿ ನಿಶಾ ಜೇಮ್ಸ್ ಅವರನ್ನು ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಳಿಸಿ ಸರಕಾರ ಡಿ.31ರಂದು ಆದೇಶ ಹೊರಡಿಸಿತ್ತು.