ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಇಡಿ ಸಮ್ಮನ್ಸ್…

142
firstsuddi

ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.13ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಇಡಿ ಸಮ್ಮನ್ಸ್ ಜಾರಿ ಮಾಡಿದ್ದು, ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ಇಡಿ ಅಧಿಕಾರಿಗಳ ಬಲೆಗೆ ಸಿಲುಕಿದಂತಾಗಿದೆ. ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿಯ ಹೈಕೋರ್ಟ್ ಜಾಮೀನು ನೀಡಿದ ಬಳಿಕ ಇಡಿ ಅಧಿಕಾರಿಗಳು ಮೊದಲ ಬಾರಿ ಸಮ್ಮನ್ಸ್ ನೀಡಿದ್ದು, 2013-2014 ರಲ್ಲಿ ನಡೆಸಿರುವ ಆರ್ಥಿಕ ವ್ಯವಹಾರಗಳ ಬಗೆಗಿನ ಮಾಹಿತಿಯನ್ನು ಕೋರಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.