ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ-ಅಯ್ಯಪ್ಪ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ಮೂವರ ಧಾರುಣ ಸಾವು…

468
firstsuddi

ರಾಮನಗರ : ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ವೇಳೆ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಮೃತಪಟ್ಟು 6ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಮಾಗಡಿ ತಾಲ್ಲೂಕಿನ ಗುಡೆಮಾರನಹಳ್ಳಿ ಬಳಿ ನಡೆದಿದೆ. ಮಂಗಳೂರಿನ ಅಂಕಿ ಮೂಲದ ಮಾಲಾಧಾರಿಗಳು ಶಬರಿಮಲೆಗೆ ಹೋಗಿ ವಾಪಾಸ್ ಬರುತ್ತಿದ್ದ ವೇಳೆ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಮೃತರ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 6ಮಂದಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.