ಚಿಕ್ಕಮಗಳೂರು : ಸ್ವಾತಿ ಅತ್ಯಾಚಾರ-ಕೊಲೆ ಪ್ರಕರಣದ ತೀರ್ಪು ನಾಳೆಗೆ ಮುಂದೂಡಿಕೆ…

252
firstsuddi

ಚಿಕ್ಕಮಗಳೂರು : ಬಿಕಾಂ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಳೆಗೆ ಮುಂದೂಡಿದೆ. ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆ ಗ್ರಾಮದಲ್ಲಿ 2016ರ ಫೆಬ್ರವರಿಯಲ್ಲಿ ಪರೀಕ್ಷೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಿಕಾಂ ವಿದ್ಯಾರ್ಥಿನಿಯನ್ನು ಆರೋಪಿಗಳಾದ ಪ್ರದೀಪ್ ಹಾಗೂ ಸಂತೋಷ್ ಅಪಹರಿಸಿ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಕುರಿತು ಆರೋಪಿ ಪ್ರದೀಪ್ ಹಾಗೂ ಸಂತೋಷ್ ವಿರುದ್ದ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.