ಚಿಕ್ಕಮಗಳೂರು : ವಿದ್ಯಾರ್ಥಿಗಳು ಆತಂಕ ಮತ್ತು ಭಯವನ್ನು ಬಿಟ್ಟು ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು : ಕೆ.ನಾಗರಾಜ್.

318
firstsuddi

ಚಿಕ್ಕಮಗಳೂರು : ವಿದ್ಯಾರ್ಥಿಗಳು ಆತಂಕ ಮತ್ತು ಭಯವನ್ನು ಬಿಟ್ಟು ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ನಾಗರಾಜ್ ಸಲಹೆ ಮಾಡಿದರು.
ನಗರದ ಮಲೆನಾಡು ವಿದ್ಯಾ ಸಂಸ್ಥೆಯಲ್ಲಿ ಎಂಇಎಸ್ ಛೇಂಬರ್ ಆಫ್ ಕಾಮರ್ಸ್ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಬುಧವಾರ ಆಯೋಜಿಸಿದ್ದ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಭಯ ಮತ್ತು ಆತಂಕ ಪಡುವುದರಿಂದ ಪರೀಕ್ಷೆಯಲ್ಲಿ ಸರಿಯಾಗಿ ಬರೆಯಲು ಸಾಧ್ಯವಾಗುವುದಿಲ್ಲ ಹಾಗಾಗಿ ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಪರೀಕ್ಷೆಯನ್ನು ಸವಾಲಾಗಿ ಸ್ವೀಕರಿಸಬೇಕು ಎಂದರು.
ಯದ್ದಕಾಲದಲ್ಲಿ ಶಸ್ತ್ರಾಭ್ಯಾಸ ಎಂಬಂತೆ ಪರೀಕ್ಷೆ ಬಂದಾಗ ಓದುವ ಪ್ರವೃತ್ತಿಯನ್ನು ಬಿಡಬೇಕು, ಪ್ರತಿದಿನ ಅಂದಿನ ಪಾಠವನ್ನು ಅಂದೇ ಮನನ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಗೌರವ ಕಾರ್ಯದರ್ಶಿ ಡಾ|| ಡಿ.ಎಲ್.ವಿಜಯಕುಮಾರ್ ಸರಿಯಾದ ಪೂರ್ವ ತಯಾರಿಯೊಂದಿಗೆ ಪರೀಕ್ಷೆ ಎದುರಿಸುವ ಮೂಲಕ ವಿದ್ಯಾರ್ಥಿಗಳು ಸಂಸ್ಥೆಗೆ ಕೀರ್ತಿ ತರಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಛೇಂಬರ್ ಆಫ್ ಕಾಮರ್ಸ್‍ನ ಕಾರ್ಯದರ್ಶಿ ಕೆ.ಎನ್.ಮಂಜುನಾಥ ಭಟ್ ಪರೀಕ್ಷಾ ಪೂರ್ವ ತಯಾರಿ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಂಸ್ಥೆಯ ಅಧ್ಯಕ್ಷ ಎನ್.ಕೇಶವಮೂರ್ತಿ ಅಧ್ಯಕ್ಷತೆ ವಹಿಸಿದ್ದರು, ಆಡಳಿತಾಧಿಕಾರಿ ಎಸ್.ಶಾಂತಕುಮಾರಿ, ಪದವಿ ಕಾಲೇಜಿನ ಪ್ರಾಚಾರ್ಯ ಡಾ
ಹೆಚ್.ವಿಷ್ಣುವರ್ಧನ ಪಿ.ಯು.ಕಾಲೇಜಿನ ಪ್ರಾಚಾರ್ಯೆ ಎಂ.ಬಿ.ಜಯಶ್ರೀ, ಶ್ರೇಯಸ್, ಪ್ರೀತಂ ಜೈನ್, ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು, ನಿವೃತ್ತ ಶಿಕ್ಷಕ ಎಸ್.ಶಂಕರನಾರಾಯಣ ಭಟ್, ಉಪನ್ಯಾಸಕ ಡಾ|| ಹೆಚ್.ಎಸ್.ಸತ್ಯನಾರಾಯಣ ಪರೀಕ್ಷೆ ಎದುರಿಸುವ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.
ಎಸ್.ಎಲ್.ಮಾನಸ ಕಾರ್ಯಕ್ರಮವನ್ನು ನಿರೂಪಿಸಿದರು, ಎಂ.ಬಿ.ಮೇಘ ಸ್ವಾಗತಿಸಿದರು, ಎಸ್.ನಂದಿನಿ ವಂದಿಸಿದರು.