ಮೂಡಿಗೆರೆ : ಪೌರತ್ವ ಕಾಯ್ದೆ ತಿದ್ದುಪಡಿಯಿಂದ ಭಾರತೀಯ ಮುಸ್ಲಿಮರು ಆತಂಕ ಪಡುವ ಅವಶ್ಯಕತೆ ಇಲ್ಲ : ಶಾಸಕ ಎಂ.ಪಿ. ಕುಮಾರಸ್ವಾಮಿ.

746
firstsuddi

ಮೂಡಿಗೆರೆ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ತಿದ್ದುಪಡಿಯಿಂದ ಭಾರತೀಯ ಮುಸ್ಲಿಮರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಹೇಳಿದರು. ತಾಲ್ಲೂಕಿನ ಜಾವಳಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪೌರತ್ವ ಕಾಯ್ದೆ ತಿದ್ದುಪಡಿಯಿಂದ ಭಾರತೀಯ ಮುಸ್ಲಿಮರು ಆತಂಕ ಪಡುವ ಅವಶ್ಯಕತೆ ಇಲ್ಲ, ಅದು ಪಾಕಿಸ್ತಾನ ,ಅಫ್ಘನ್, ಬಾಂಗ್ಲಾ, ದೇಶದ ಅಲ್ಪಸಂಖ್ಯಾತ ಹಿಂದೂ ,ಕ್ರೈಸ್ತ, ಸಿಖ್, ಬೌದ್ಧರಿಗೆ, ಬಾರತದಲ್ಲಿ ಪೌರತ್ವ ನೀಡುವುದಾಗಿದೆ ಎಂದರು. ಬಳಿಕ ಮಾತನಾಡಿದ ಬಿಜೆಪಿ ಮುಖಂಡ ಪರೀಕ್ಷಿತ್ ಜಾವಳಿ ಅವರು, ಕಾಂಗ್ರೆಸ್ ದೇಶದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ ಇದಕ್ಕೆ ಮುಂದೆ ಕಾಂಗ್ರೆಸ್ ದೊಡ್ಡ ಪ್ರಮಾಣದಲ್ಲಿ ಬೆಲೆ ತೆರಬೇಕಾಗುತ್ತದೆ, ಅಲ್ಪಸಂಖ್ಯಾತರಿಗೆ ತಪ್ಪು ಮಾಹಿತಿ ನೀಡಿ ಅವರಿಗೆ ಪ್ರಚೋದನೆ ನೀಡಲಾಗುತ್ತಿದೆ ಎಂದರು. ಬಳಿಕ ಶಾಸಕರು ಮನೆ ಮನೆಗೆ ತೆರಳಿ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶಶಿಧರ್, ಕ್ರಷ್ಣ ಟೈಲರ್, ಸುನಿಲ್ ಮೇಗೂರು, ನರೇಂದ್ರ, ಇದ್ದರು.