ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ಸರ್ಕಾರ…

155
firstsuddi

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನದ ವಿಧಿ 14,12 ಹಾಗೂ 25ನ್ನು ಉಲ್ಲಂಘಿಸಿತ್ತದೆ. ಅಲ್ಲದೇ ಭಾರತ ಸಂವಿಧಾನದ ಜಾತ್ಯತೀತೆಯ ಮೂಲತತ್ವಗಳ ವಿರುದ್ಧವಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ. ಈ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿ ಹೊಸ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿದ್ದಾರೆ.