ಉಡುಪಿ : ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರು…

344
firstsuddi

ಉಡುಪಿ : ತಮಿಳುನಾಡು ಪೊಲೀಸ್ ಅಧಿಕಾರಿಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಉಡುಪಿ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತ ಉಗ್ರರನ್ನು ಅಬ್ದುಲ್ ಶಮೀಮ್ ಹಾಗೂ ತೌಫಿಕ್ ಎಂದು ಗುರುತಿಸಲಾಗಿದ್ದು, ಈ ಇಬ್ಬರು ಉಗ್ರರು ಜ.8ರಂದು ರಾತ್ರಿ ತಮಿಳುನಾಡು-ಕೇರಳ ಗಡಿಯ ಕಲಿಯಿಕ್ಕಾವಿಲ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಈ ಮಾರ್ಗವಾಗಿ ಬಂದಿದ್ದ ಉಗ್ರರು ಕಾರಿಂದ ಇಳಿದು ಸಬ್ ಇನ್ಸ್‌ಪೆಕ್ಟರ್  ವಿಲ್ಸನ್ ಎಂಬುವವರನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಗುಪ್ತಚರ ಇಲಾಖೆ, ಕೇರಳ ಹಾಗೂ ತಮಿಳುನಾಡು ಪೊಲೀಸರ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮಂಗಳೂರು ಹಾಗೂ ಉಡುಪಿ ಪೊಲೀಸರು ಇಬ್ಬರು ಶಂಕಿತ ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆದರೆ ಈ ಬಗ್ಗೆ ಯಾವುದೇ ಸ್ಪಷ್ಠ ಮಾಹಿತಿಯನ್ನು ಪೊಲೀಸರು ನೀಡಿಲ್ಲ.