ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಬಿಜೆಪಿ-ಜೆಡಿಎಸ್ ಮುಖಂಡರು…

194
firstsuddi

ಮಂಡ್ಯ : ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ನಡುವೆ ಗಲಾಟೆ ಆಗಿರುವ ಘಟನೆ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಬಿಲ್ಲೇನಹಳ್ಳಿಯಲ್ಲಿ ನಡೆದಿದೆ. ನಿನ್ನೆ ನಡೆದ ಬಿಲ್ಲೇನಹಳ್ಳಿ ಗವಿರಂಗನಾಥಸ್ವಾಮಿ ರಥೋತ್ಸವದ ವೇಳೆ ದೇವರಿಗೆ ಮೊದಲ ಪೂಜೆ ಸಲ್ಲಿಸಲು ಜೆಡಿಎಸ್ ತಾಲ್ಲೂಕು ಪಂಚಾಯಿತಿ ಸದಸ್ಯರಾದ ದಿನೇಶ್ ಅವರು ಮುಂದಾಗಿದ್ದರು. ಈ ವೇಳೆ ಬಿಜೆಪಿ ಮುಖಂಡರು ದೇವರಿಗೆ ಮೊದಲ ಪೂಜೆ ಕ್ಷೇತ್ರದ ಶಾಸಕರಾದ ನಾರಾಯಣಗೌಡ ಅವರು ಸಲ್ಲಿಸಬೇಕು. ಹಿಂದಿನಿಂದಲೂ ಹಾಗೆ ನಡೆದುಕೊಂಡು ಬಂದಿದೆ ಎಂದು ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ ಬಳಿಕ ಶಾಸಕ ನಾರಾಯಣಗೌಡ ಅವರು ದೇವರಿಗೆ ಮೊದಲ ಪೂಜೆಯನ್ನು ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.