ನಿರ್ಭಯಾ ಪ್ರಕರಣ-ಫೆ.1ರಂದು ಆರೋಪಿಗಳಿಗೆ ಗಲ್ಲು ಫಿಕ್ಸ್…

188
firstsuddi

ನವದೆಹಲಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳಿಗೆ ದೆಹಲಿ ಕೋರ್ಟ್ ಡೆತ್ ವಾರೆಂಟ್ ಜಾರಿ ಮಾಡಿದೆ. ಆರೋಪಿಗಳಲ್ಲಿ ಒಬ್ಬನಾದ ಮುಖೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ ಬಳಿಕ ಸಂತ್ರಸ್ಥೆಯ ತಾಯಿ ಮಗಳ ಸಾವಿನ ನಡುವೆ ರಾಜಕೀಯ ಮಾಡಲಾಗುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ದೆಹಲಿ ಕೋರ್ಟ್ ಆರೋಪಿಗಳಿಗೆ ಹೊಸ ಡೆತ್ ವಾರೆಂಟ್ ಜಾರಿ ಮಾಡಿದ್ದು, ಫೆ.1ರಂದು ಬೆಳಿಗ್ಗೆ 6ಗಂಟೆಗೆ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಆದೇಶ ಹೊರಡಿಸಿದೆ.