ಶೃಂಗೇರಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ…

585
firstsuddi

ಚಿಕ್ಕಮಗಳೂರು : ಬಿಕಾಂ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆ ಗ್ರಾಮದಲ್ಲಿ 2016ರ ಫೆಬ್ರವರಿಯಲ್ಲಿ ಪರೀಕ್ಷೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಿಕಾಂ ವಿದ್ಯಾರ್ಥಿನಿಯನ್ನು ಆರೋಪಿಗಳಾದ ಪ್ರದೀಪ್ ಹಾಗೂ ಸಂತೋಷ್ ಅಪಹರಿಸಿ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಕುರಿತು 4 ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ನ್ಯಾ. ಉಮೇಶ್ ಎಂ ಅಡಿಗ ನೇತೃತ್ವದ ಪೀಠ ಆರೋಪಿಗಳಾದ ಪ್ರದೀಪ್ ಹಾಗೂ ಸಂತೋಷ್ ಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.