ಹುಟ್ಟುಹಬ್ಬದ ಆಚರಣೆ ವೇಳೆ ತಲ್ವಾರ್ ಹಿಡಿದು ಕೇಕ್ ಕತ್ತರಿಸಿದ ನಟ ದುನಿಯಾ ವಿಜಯ್…!

235

ಬೆಂಗಳೂರು : ಸ್ಯಾಂಡಲ್‍ವುಡ್ ನಟ ದುನಿಯಾ ವಿಜಯ್ ಅವರು ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ವೇಳೆ ಅಭಿಮಾನಿಗಳೊಂದಿಗೆ ಸೇರಿ ತಲ್ವಾರ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇಂದು ದುನಿಯಾ ವಿಜಯ್ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಕೋರಲು ರಾಜ್ಯದ ವಿವಿದೆಡೆಯಿಂದ ಆಗಮಿಸಿದ್ದು, ಈ ವೇಳೆ ದುನಿಯಾ ವಿಜಯ್ ಅವರು ತಮ್ಮ ತಂದೆ-ತಾಯಿ ಹಾಗೂ ಅವರ ಎರಡನೇ ಪತ್ನಿ ಕೀರ್ತಿ ಅವರೊಂದಿಗೆ ಸೇರಿ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವೇಳೆ ತಮ್ಮ ಸಲಗ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದು, ತಮ್ಮ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ.