ಬಿಜೆಪಿ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಜೆ.ಪಿ. ನಡ್ಡಾ…

219
firstsuddi

ನವದೆಹಲಿ : ಇಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು ಹಾಗೂ ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ. ಈ ಹಿಂದೆ ಬಿಜೆಪಿ ರಾಷ್ಟ್ರೀಯ ಕಾರ್ಯಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅವರು, ಅಮಿತ್ ಶಾ ಅವರು ಕೇಂದ್ರ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದಾಗಲೆ  ಅಧಿಕಾರ ಸ್ವೀಕರಿಸಬೇಕಿತ್ತು. ಆದರೆ ಮಹಾರಾಷ್ಟ್ರ ಹಾಗೂ ಹರಿಯಾಣದ ಚುನಾವಣೆ ವೇಳೆ ಅಮಿತ್ ಶಾ ಅವರು ಮುಖ್ಯ ಪಾತ್ರ ವಹಿಸಿದ್ದರಿಂದ ಈಗಾ ಜೆ.ಪಿ. ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಹಿಮಾಚಲಪ್ರದೇಶ ಮೂಲದ ಬ್ರಾಹ್ಮಣ ಸಮುದಾಯದ ಜೆ.ಪಿ.ನಡ್ಡಾ ಅವರು ಹಿಂದಿನ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.