ಮಂಗಳೂರು : ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ…

190
firstsuddi

ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದ್ದು, ವಿಮಾನ ನಿಲ್ದಾಣದ ಸುತ್ತ ಮುತ್ತ ಆತಂಕದ ವಾತಾವರಣ ಸೃಷ್ಠಿಯಾಗಿದೆ. ಇಂದು ಬೆಳಿಗ್ಗೆ ಬಜಪೆ ಬಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಲ್ಯಾಪ್‍ಟಾಪ್ ಬ್ಯಾಗ್ ಪತ್ತೆಯಾಗಿತ್ತು. ಬ್ಯಾಗ್ ಪತ್ತೆಯಾದ ಹಿನ್ನೆಲೆ, ನಗರ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದು, ಈ ವೇಳೆ ಬ್ಯಾಗ್‍ನಲ್ಲಿ ಸಜೀವ ಬಾಂಬ್ ಇರುವುದಾಗಿ ತಿಳಿದು ಬಂದಿದೆ. ಪೊಲೀಸರು ಬ್ಯಾಗ್‍ನ್ನು ವಿಮಾನ ನಿಲ್ದಾಣದಿಂದ ಹೊರ ತಂದು ಸುರಕ್ಷಿತ ಸ್ಥಳದಲ್ಲಿ ಇಟ್ಟಿದ್ದು, ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಗಳು ಬಾಂಬ್ ನಿಷ್ಕ್ರಿಯಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ ಎನ್ನಲಾಗಿದೆ.