ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‍ನಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಯೋಧರು ಎಂದಿನಂತೆ ನಿರ್ದಿಷ್ಟ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ಯೋಧರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಅಡಗಿಕೊಂಡಿರುವ ಖಚಿತ ಮಾಹಿತಿಯನ್ನು ತಿಳಿದು ಭದ್ರತಾ ಪಡೆಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದು, ಇನ್ನೂ ಕೆಲ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿದೆ.










