ಬೀದರ್ : ಪಂಕ್ಚರ್ ಆಗಿ ನಿಂತಿದ್ದ ಗೂಡ್ಸ್ ಆಟೋಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಮನಬಾದ್ ತಾಲ್ಲೂಕಿನ ಮಿನಕೇರಾ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇಸ್ಮಾಯಿಲ್(25), ವಿಜಯಕುಮಾರ್(30) ಹಾಗೂ ಅನ್ವರ್(35) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಮೃತರು ಹೆದ್ದಾರಿಯಲ್ಲಿ ಪಂಕ್ಚರ್ ಆಗಿ ನಿಂತಿದ್ದ ವಾಹನದ ಚಕ್ರವನ್ನು ಬದಲಾಯಿಸಲು ಹೆದ್ದಾರಿ ಪಕ್ಕದಲ್ಲಿಯೇ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಬಗದಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.










