ರಾಜ್ಯದ ಇಬ್ಬರು ಮಕ್ಕಳು ಸೇರಿ ಒಟ್ಟು 22 ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರಧಾನ…

213
firstsuddi

ನವದೆಹಲಿ : ಕರ್ನಾಟಕದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 22 ಮಕ್ಕಳಿಗೆ ಇಂದು ಶೌರ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ದೇಶದ ವಿವಿದೆಡೆ ಅಪಾಯದಲ್ಲಿದ್ದವರ ಪ್ರಾಣವನ್ನು ರಕ್ಷಿಸಿ ಸಮಯ ಪ್ರಜ್ಞೆ ಮೆರೆದ ಮಕ್ಕಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಆರತಿ ಶೇಟ್(8) ಹಾಗೂ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸಂಕನೂರಿನ ವೆಂಕಟೇಶ್(12) ಶೌರ್ಯ ಪ್ರಶಸ್ತಿಯನ್ನು ಪಡೆಯುವ ಮೂಲಕ ಕರ್ನಾಟಕಕ್ಕೆ ಕೀರ್ತಿಯನ್ನು ತಂದಿದ್ದಾರೆ. ಈ ಪ್ರಶಸ್ತಿಯನ್ನು ಪಡೆದಿರುವ 22 ಮಕ್ಕಳು ಜ.26ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಡೆಯುವ ಪಥಸಂಚಲನ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.