ನೇಣು ಬಿಗಿದುಕೊಂಡು ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು…

1042
firstsuddi

ಮುಂಬೈ : ಬಾಲಿವುಡ್ ಕಿರುತೆರೆ ನಟಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಸೆಜಲ್ ಶರ್ಮಾ ಆತ್ಮಹತ್ಯೆ ಮಾಡಿಕೊಂಡ ನಟಿ. ಸೆಜಲ್ ಶರ್ಮಾ ಅವರು ‘ದಿಲ್ ತೋ ಹ್ಯಾಪಿ ಹೈ ಜಿ’ ಧಾರಾವಾಹಿಯಲ್ಲಿ ಸಿಮ್ಮಿ ಖೋಸ್ಲಾ ಪಾತ್ರದ ಮೂಲಕ ಜನಪ್ರಿಯರಾಗಿದ್ದರು. ಆದರೆ ನಿನ್ನೆ ತಮ್ಮ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಟಿ ಸೆಜಲ್ ಶರ್ಮಾ ಅವರ ರೂಮ್ ಮೇಟ್ ಶುಕ್ರವಾರ ಬೆಳಿಗ್ಗೆ ಅವರಿಗೆ ಕರೆ ಮಾಡಿದ್ದಾರೆ. ಎಷ್ಟೂ ಕರೆ ಮಾಡಿದರೂ ನಟಿ ಫೋನ್ ಸ್ವೀಕರಿಸದೇ ಇದ್ದ ಕಾರಣ ರೂಮಿಗೆ ಬಂದು ನೋಡಿದಾಗ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಬಂದಿದ್ದು, ಕೂಡಲೇ ನಟಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ನಟಿ ಮೃತಪಟ್ಟಿದ್ದಾರೆ. ಅಲ್ಲದೇ ರೂಮಿನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ವೈಯಕ್ತಿಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದಾರೆ. ಈ ಕುರಿತು ಮೀರಾ ರಸ್ತೆ ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.