ನಾಳೆ ಸಂಪುಟ ವಿಸ್ತರಣೆ ಬಹುತೇಕ ಖಚಿತ-ಸಿಎಂ ಯಡಿಯೂರಪ್ಪ ಭರವಸೆ…

285
firstsuddi

ಬೆಂಗಳೂರು : ನಾಳೆ ಸಚಿವ ಸಂಪುಟ ವಿಸ್ತರಣೆ 99% ಆಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ. ದೆಹಲಿಗೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾತ್ರಿ 9ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭೇಟಿಗೆ ಸಮಯ ನಿಗದಿ ಮಾಡಿದ್ದಾರೆ. ಬಳಿಕ ರಾತ್ರಿ 10 ಗಂಟೆಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ. ಸಮಯ ನೋಡಿಕೊಂಡು ಪ್ರಧಾನಿ ಮೋದಿ ಅವರನ್ನು ಭೆಟಿ ಮಾಡಿ ಚರ್ಚೆ ಮಾಡುತ್ತೇನೆ. ನಾಳೆ ಸಚಿವ ಸಂಪುಟ ವಿಸ್ತರಣೆಯಾಗುವುದರಲ್ಲಿ 99% ಭರವಸೆ ಇದೆ ಎಂದರು.