ಹಾಸನ : ಸಾರಿಗೆ ಬಸ್, ಟಾಟಾ ಮ್ಯಾಜಿಕ್ ಹಾಗೂ ಗೂಡ್ಸ್ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಸೂಳೆಕೆರೆ ಬಳಿ ನಡೆದಿದೆ. ರಮೇಶ್(24), ಬಸವರಾಜು(48) ಹಾಗೂ ಯಲ್ಲಯ್ಯ(50) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಬೆಂಗಳೂರು-ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ 11ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










