ಇಂದಿನಿಂದ ಸಂಸತ್ ಅಧಿವೇಶನ ಆರಂಭ-ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ…

213
firstsuddi

ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ನಾಳೆ ಲೋಕಸಭೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ದೇಶದಲ್ಲಿ ಎದುರಾಗಿರುವ ಆರ್ಥಿಕ ಹಿನ್ನೆಡೆ, ಕೈಗಾರಿಕಾ ಬೆಳವಣಿಗೆ ಕುಂಠಿತ, ನಿರುದ್ಯೋಗ ಸಮಸ್ಯೆ ಹೀಗೆ ಮೊದಲಾದ ಸಮಸ್ಯೆಗಳ ಮುಂದಿಟ್ಟುಕೊಂಡು ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದು ಆರಂಭವಾದ ಮೊದಲ ಹಂತದ ಸಂಸತ್ತಿನ ಅಧಿವೇಶನ ಫೆ.11 ರಂದು ಮುಕ್ತಾಯವಾಗಲಿದ್ದು, ಎರಡನೇ ಹಂತದ ಅಧಿವೇಶನ ಮಾರ್ಚ್ 2ರಿಂದ ಏಪ್ರಿಲ್ 3ರವರೆಗೆ ನಡೆಯಲಿದೆ ಎನ್ನಲಾಗಿದೆ.