ಚಿಕ್ಕಮಗಳೂರು : ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ತಾಲ್ಲೂಕಿನ ಕೆ.ಬಿ.ಹಾಳ್‍ನಲ್ಲಿ ಫೆ.9 ರಂದು ಜಿಲ್ಲಾ ಮಟ್ಟದ ಜಾನಪದ ಉತ್ಸವ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಪರಿಷತ್ತಿನ ರಾಜ್ಯಾಧ್ಯಕ್ಷ ಟಿ.ತಿಮ್ಮೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಧಾನ ಪರಿಷತ್ತಿನ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಜಾನಪದ ಕಲಾವಿದರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದು, ಆಶಾಕಿರಣ ಅಂಧ ಮಕ್ಕಳ ಶಾಲೆಯ ಅಧ್ಯಕ್ಷ ಡಾ|| ಜೆ.ಪಿ.ಕೃಷ್ಣೇಗೌಡ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷೆ ಮಂಜಮ್ಮ ಜೋಗತಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಟಿ.ಡಿ.ರಾಜೇಗೌಡ, ಡಿ.ಎಸ್.ಸುರೇಶ್, ಬೆಳ್ಳಿಪ್ರಕಾಶ್, ಎಸ್.ಎಲ್.ಭೋಜೇಗೌಡ, ಎಂ.ಕೆ.ಪ್ರಾಣೇಶ್, ಜಿ.ಪಂ.ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ಸದಸ್ಯ ಹಿರಿಗಯ್ಯ, ತಾ.ಪಂ. ಅಧ್ಯಕ್ಷ ನಟ್ಟೇಕೇರನಹಳ್ಳಿ ಜಯಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ ನಡೆಯಲಿರುವ ಜಾನಪದ ನುಡಿ ಸಂಭ್ರಮ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತ ಸ.ಗಿರಿಜಾ ಶಂಕರ್ ವಹಿಸಲಿದ್ದು, ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್, ಸಾಹಿತಿ ಚಟ್ನಳ್ಳಿ ಮಹೇಶ್ ಭಾಗವಹಿಸಲಿದ್ದಾರೆ.
ಸಮಾರಂಭಕ್ಕೆ ಮುನ್ನ ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ ಗ್ರಾಮದಲ್ಲಿ ನಡೆಯಲಿದೆ ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ತಿಳಿಸಿದ್ದಾರೆ.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಫೆ.9 ರಂದು ಜಿಲ್ಲಾ ಮಟ್ಟದ...










