ಮೂಡಿಗೆರೆ : ಅಗ್ರಹಾರ ಶ್ರೀ ಆದಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಬ್ರಹ್ಮ ರಥೋತ್ಸವ ನಡೆಯಿತು…

1360
firstsuddi

ಮೂಡಿಗೆರೆ : ತಾಲ್ಲೂಕಿನ ಅಗ್ರಹಾರ ಶ್ರೀ ಆದಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಮಾಘ ಶುದ್ಧ ಷಷ್ಠಿಯ ದಿನವಾದ ಇಂದು ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ರಥೋತ್ಸವದ ಅಂಗವಾಗಿ ಶ್ರೀ ಆದಿ ಸುಬ್ರಹ್ಮಣ್ಯ ಸ್ವಾಮಿಗೆ ವಿವಿಧ ಪೂಜೆ ಸಲ್ಲಿಸಲಾಯಿತು. ರಥೋತ್ಸವಕ್ಕೂ ಮುನ್ನ ಮಧ್ಯಾಹ್ನ ವಾಡಿಕೆಯಂತೆ ಗರುಡನ ಆಗಮನವಾಗಿದ್ದು, ರಥೋತ್ಸವ ನಡೆಯುವ ಸಮಯದಲ್ಲಿ ಗರುಡ ರಥದ ಸುತ್ತ 3 ಸುತ್ತು ಸುತ್ತಿದ ಬಳಿಕ ರಥೋತ್ಸವ ನಡೆಯಿತು. ಈ ದೃಶ್ಯವನ್ನು ನೋಡಲು ತಾಲೂಕಿನ ಸುತ್ತಮುತ್ತಲಿನ ಗ್ರಾಮದಿಂದ ಹಾಗೂ ಹೊರ ಜಿಲ್ಲೆಯಿಂದಲೂ ಸಹಸ್ರಾರು ಭಕ್ತ ಸಮೂಹ ಹರಿದು ಬಂದಿತು. ಭಕ್ತಾಧಿಗಳು ಹಣ್ಣುಕಾಯಿ ಅರ್ಪಿಸಿ ದೇವರ ದರ್ಶನ ಪಡೆದರು. ರಥೋತ್ಸವದ ಪ್ರಯುಕ್ತ ದೇವಸ್ಥಾನದ ಆವರಣವನ್ನು ತಳಿರುತೋರಣಗಳಿಂದ ಸಿಂಗರಿಸಲಾಗಿತ್ತು. ವಿದ್ಯುತ್ ದೀಪಾಲಂಕಾರ ಹಾಗೂ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಗಿತ್ತು. ಜಾತ್ರೆಗೆ ಹೋಗಲು ಮೂಡಿಗೆರೆ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ವಿಶೇಷ 12 ಬಸ್‍ಗಳ ವ್ಯವಸ್ಥೆ ಕಲ್ಪಿಸಲಾಗಿತ್ತು.