ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯನ್ನು ಸೋಮವಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸಿದ್ಧಪಡಿಸಿದ ಪಟ್ಟಿಯನ್ನು ಪಕ್ಷದ ವರಿಷ್ಠರು ಒಪ್ಪಿಕೊಂಡಿದ್ದಾರೆ. ಕೆಲವರನ್ನು ಮನವೊಲಿಸಿ ಹಾಗೂ ರಾಜ್ಯದ ಕೆಲ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಪ್ರಸ್ತುತ ಇರುವ ಮೂರು ಉಪಮುಖ್ಯಮಂತ್ರಿ ಸ್ಥಾನಗಳನ್ನು ಮುಂದುವರೆಸಲಾಗುವುದು. ಪುನಃ ಹೊಸ ಉಪಮುಖ್ಯಮಂತ್ರಿ ಸ್ಥಾನವನ್ನು ಸೃಷ್ಠಿಸುವುದಿಲ್ಲ ಎಂದು ಹೇಳಿದರು.










