ತಿರುವನಂತಪುರಂ : ಚೀನಾದಲ್ಲಿ 340ಕ್ಕೂ ಹೆಚ್ಚು ಮಂದಿಯನ್ನು ಮೃತ್ಯುಕೂಪಕ್ಕೆ ತಳ್ಳಿದ ಕೊರೊನಾ ವೈರಸ್ ಈಗಾ ಕೇರಳದಲ್ಲಿ ಪತ್ತೆಯಾಗಿದ್ದು, ಕಾಸರಗೋಡಿನಲ್ಲಿ ಮೂರನೇ ವ್ಯಕ್ತಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ದೃಢಪಡಿಸಿದ್ದಾರೆ. ಸೋಂಕು ತಗುಲಿರುವ ವ್ಯಕ್ತಿಯನ್ನು ಕಾಸರಗೋಡಿನ ಆಸ್ಪತ್ರೆಯ ವಿಶೇಷ ವಾರ್ಡ್ ಒಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ಸೋಂಕಿತ ವ್ಯಕ್ತಿ ಕೆಲವು ದಿನಗಳ ಹಿಂದೆ ಚೀನಾದಿಂದ ಕೇರಳಕ್ಕೆ ಆಗಮಿಸಿದ್ದರು ಎನ್ನಲಾಗಿದೆ.
ಭಾರತದಲ್ಲಿ ಕೊರೊನಾ ವೈರಸ್ ಮೊದಲ ಬಾರಿಗೆ ಕೇರಳದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿತ್ತು. ಚೀನಾದ ವುಹಾನ್‍ನಿಂದ ಬಂದ ವಿದ್ಯಾರ್ಥಿನಿಯೊಬ್ಬರಲ್ಲಿ ಕೊರೊನಾ ವೈರಸ್ ಪತ್ತೆಯಾಗಿತ್ತು. ಬಳಿಕ ವುಹಾನ್‍ನಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿಯೋರ್ವನಲ್ಲಿ ಸೋಂಕು ಪತ್ತೆಯಾಗಿತ್ತು.ಇದೀಗ ಮೂರನೇ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿರುವುದು ದೃಢಪಟ್ಟಿದೆ.










