ಮಹಾತ್ಮ ಗಾಂಧೀಜಿ ಅವರ ಬಗ್ಗೆ ವಿವಾಧಾತ್ಮಕ ಹೇಳಿಕೆ-ಕ್ಷಮೆಯಾಚಿಸುವಂತೆ ಸಂಸದ ಅನಂತ್ ಕುಮಾರ್ ಹೆಗ್ಗಡೆಗೆ ಬಿಜೆಪಿ ಹೈಕಮಾಂಡ್ ಸೂಚನೆ…

355
firstsuddi

ಬೆಂಗಳೂರು : ಸದಾ ಒಂದಲ್ಲ ಒಂದು ವಿವಾದವನ್ನು ಮೈಮೇಲೆ ಎಳೆದುಕೊಳ್ಳುವ ಸಂಸದ ಅನಂತ್ ಕುಮಾರ್ ಹೆಗ್ಗಡೆ ಅವರು ಈಗಾ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದರ ಮೂಲಕ ಎಲ್ಲರ ಕಂಗೆಣ್ಣಿಗೆ ಗುರಿಯಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಬೆಂಗಳುರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟವನ್ನು ಬ್ರಿಟಿಷರ ಒಪ್ಪಿಗೆ ಮತ್ತು ಬೆಂಬಲದೊಂದಿಗೆ ನಡೆಸಲಾಯಿತು. ಹಾಗೂ ಮಹಾತ್ಮ ಗಾಂಧೀಜಿ ನೇತೃತ್ವದ ಸ್ವಾತಂತ್ರ್ಯ ಹೋರಾಟ ಒಂದು ನಾಟಕ ಅಷ್ಟೇ ಎಂಬ ಹೇಳಿಕೆ ನೀಡಿದ್ದರು. ಅಲ್ಲದೇ ದೇಶಕ್ಕಾಗಿ ಯಾರು ಶಸ್ತ್ರವನ್ನು ಹಿಡಿದು ಹೋರಾಟ ನಡೆಸಲು ಮುಂದಾದರೋ ಅವರೆಲ್ಲರೂ ನೇಣಿನ ಉರುಳಿಗೆ ಕೊರಳೊಡ್ಡಿದರು. ಯಾರು ಬ್ರಿಟಿಷರೊಂದಿಗೆ ಒಪ್ಪಂದ ಮಾಡಿಕೊಂಡು ಸ್ವಾತಂತ್ರ್ಯ ಹೊರಾಟಗಾರ ಎಂಬ ಬಿರುದು ಪಡೆದುಕೊಂಡರೋ ಅವರೆಲ್ಲಾ ಇಂದು ಇತಿಹಾಸದ ಪುಟದಲ್ಲಿ ರಾರಾಜಿಸುತ್ತಿದ್ದಾರೆ ಎಂದು ಹೇಳಿದ್ದರು. ಸಂಸದ ಅನಂತ್ ಕುಮಾರ್ ಹೆಗ್ಗಡೆ ಅವರ ಈ ಹೇಳಿಕೆಗೆ ಬಿಜೆಪಿ ಹೈಕಮಾಂಡ್ ಕ್ಷಮೆಯಾಚಿಸುವಂತೆ ಸೂಚನೆ ನೀಡಿದ್ದು, ನೋಟಿಸ್ ಕೂಡಾ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.