6 ತಿಂಗಳಿನಿಂದ ಆಂತರಿಕ ಬೇಗುದಿಯಲ್ಲಿ ಬೇಯುತ್ತಿರುವ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆರಂಭಿಸುವುದು ಯಾವಾಗ? – ಕಾಂಗ್ರೆಸ್ ಟ್ವೀಟ್

211
firstsuddi

ಬೆಂಗಳೂರು : 6 ತಿಂಗಳಿನಿಂದ ಆಂತರಿಕ ಬೇಗುದಿಯಲ್ಲಿ ಬೇಯುತ್ತಿರುವ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆರಂಭಿಸುವುದು ಯಾವಾಗ? ಎಂದು ಕಾಂಗ್ರೆಸ್ ಪಕ್ಷ ಟ್ವಿಟರ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. “ 6ತಿಂಗಳಿನಿಂದ ಆಂತರಿಕ ಬೇಗುದಿಯಲ್ಲಿ ಬೇಯುತ್ತಿರುವ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ, ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆರಂಭಿಸುವುದು ಯಾವಾಗ? ಅಧಿಕಾರ ಉಳಿಸಿಕೊಳ್ಳಲು ಸ್ವಪಕ್ಷಿಯರು, ಅನರ್ಹರ ಸಂತೈಕೆ, ಹೈ ಕಮಾಂಡ್ ಒಲೈಕೆಯಲ್ಲೇ 6 ತಿಂಗಳು ಕಳೆದಿದೆ. ಆಪರೇಷನ್ ಕಮಲದಂತ ಅನೈತಿಕ ರಾಜಕಾರಣದಿಂದ ಅಧಿಕಾರಕ್ಕೆ ಬಂದವರಿನಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಹಣ ಸರಿ ಸುಮಾರು 25 ಸಾವಿರ ಕೋಟಿ ರೂ ಇನ್ನು ಬಂದಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳೇ ಇದ್ದರೂ, ರಾಜ್ಯದಿಂದ 25 ಮಂದಿ ಬಿಜೆಪಿ ಸಂಸದರನ್ನು ಗೆಲ್ಲಿಸಿ ಕಳಿಸಿದ್ದರೂ, ರಾಜ್ಯ ಆಯವ್ಯಯಕ್ಕೆ ಹಣದ ಕೊರತೆ ಸೃಷ್ಟಿಸುವ ಮೂಲಕ ಬಿಜೆಪಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ವಾಗ್ದಾಳಿ ನಡೆಸಿದೆ.